ಸಹಕಾರ ರತ್ನ ಪ್ರಶಸ್ತಿ, ಚಿದ್ರಿಗೆ ಸನ್ಮಾನ

Panditrao Chidri Sanman
Published on

ಬೀದರ್: ರಾಜ್ಯ ಸರ್ಕಾರದ ಪ್ರಸಕ್ತ ಸಾಲಿನ ಸಹಕಾರ ರತ್ನ ಪ್ರಶಸ್ತಿ ಪುರಸ್ಕøತ ಪಂಡಿತರಾವ್ ಚಿದ್ರಿ ಅವರನ್ನು ಇಲ್ಲಿಯ ಕುಂಬಾರವಾಡ ಕ್ರಾಸ್‍ನಲ್ಲಿ ಇರುವ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಸನ್ಮಾನಿಸಲಾಯಿತು.
ಬೀರಲಿಂಗೇಶ್ವರ ದೇವಸ್ಥಾನ ಸೇವಾ ಸಮಿತಿಯ ಪದಾಧಿಕಾರಿಗಳು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.
ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಸಂಘಗಳ ಮಹಾ ಮಂಡಳ ರಚಿಸಿ ಸಹಕಾರ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಚಿದ್ರಿ ಅವರಿಗೆ ಪ್ರಶಸ್ತಿ ನೀಡಿರುವುದು ಅತ್ಯಂತ ಸೂಕ್ತವಾಗಿದೆ ಎಂದು ಸಮಿತಿಯ ಅಧ್ಯಕ್ಷ ಪುಂಡಲೀಕರಾವ್ ಇಟಕಂಪಳ್ಳಿ ಹೇಳಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಾಬು ಕಾಶೆಂಪುರ, ಜಗನ್ನಾಥ ಮಹಾರಾಜ್, ಪ್ರಮುಖರಾದ ಎಂ.ಎಸ್. ಕಟಗಿ, ಮಾಳಪ್ಪ ಅಡಸಾರೆ, ಅಶೋಕ ಕಾಳಗಿ, ರಘುನಾಥ ಭೂರೆ, ಕುಶಾಲರಾವ್ ಮರಕಲೆ, ಸಂಜೀವಕುಮಾರ ಅತಿವಾಳೆ, ವಿಜಯಕುಮಾರ ಡುಮ್ಮೆ, ಶ್ರೀಪತಿ ಮೊದಲಾದವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net