ದಲ್ಲಾಳಿ ಹಾವಳಿಗೆ ಬ್ರೇಕ್ ಹಾಕಿ

yuva sang
Published on

ಬೀದರ್: ಇಲ್ಲಿನ ಪ್ರಾದೇಶಿಕ ಸಾರಿಗೆ ಕಚೇರಿ (ಆರ್.ಟಿಒ)ಯಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಾಗಿದ್ದು, ಇದಕ್ಕೆ ಬ್ರೇಕ್ ಹಾಕಬೇಕೆಂದು ಆಗ್ರಹಿಸಿ ಕರ್ನಾಟಕ ಯುವ ಸಂಘ ಸಂಸ್ಥೆಗಳ ಒಕ್ಕೂಟದಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಆರ್.ಟಿಒ ಅಧಿಕಾರಿಗಳು ದಲ್ಲಾಳಿಗಳಿಗೆ ಕಡಿವಾಣ ಹಾಕುತ್ತಿಲ್ಲ. ಎರಡು ವಾರದಲ್ಲಿ ದಲ್ಲಾಳಿಗಳಿಗೆ ಕಡಿವಾಣ ಹಾಕದಿದ್ದಲ್ಲಿ ಆರ್ಟಿಒ ಕಚೇರಿ ಎದುರು ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಕಚೇರಿಯಲ್ಲಿ ದಲ್ಲಾಳಿಗಳ ಮೂಲಕವೇ ಕೆಲಸ ಮಾಡಿಕೊಳ್ಳಬೇಕು. ನೇರವಾಗಿ ಕಚೇರಿಗೆ ಹೋಗಿ ಕೆಲಸಕ್ಕೆ ಅರ್ಜಿ ಹಾಕಿದರೆ ಅಲ್ಲಿನ ಅಧಿಕಾರಿಗಳು ಕ್ಯಾರೆ ಎನ್ನುವುದಿದಿಲ್ಲ. ಬಹುತೇಕ ಅಧಿಕಾರಿಗಳು ದಲ್ಲಾಳಿಗಳ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜವಾಬ್ದಾರಿ ವಹಿಸಿ ಕೆಲಸ ಮಾಡದ ಅಕಾರಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಒಕ್ಕೂಟದ ರಾಜ್ಯ ಗೌರವಾಧ್ಯಕ್ಷ ವಿಜಯಕುಮಾರ ಸೋನಾರೆ, ಜಿಲ್ಲಾಧ್ಯಕ್ಷ ಸುನೀಲ ಭಾವಿಕಟ್ಟಿ, ಉಪಾಧ್ಯಕ್ಷ ಪ್ರದೀಪ ಬಿರಾದಾರ, ಸಹ ಕಾರ್ಯದರ್ಶಿ ವಿಜಯಕುಮಾರ ಅಷ್ಟೂರೆ ಇತರರಿದ್ದರು. ಬೇಡಿಕೆ ಸಂಬಂಧ ಸಾರಿಗೆ ಸಚಿವ ರಾಮಲಿಂಗಾರಡ್ಡಿ ಅವರಿಗೆ ಬರೆದ ಮನವಿಪತ್ರವನ್ನು ಜಿಲ್ಲಾಧಿಕಾರಿ ಗೋವಿಂದರಡ್ಡಿ ಅವರಿಗೆ ಸಲ್ಲಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net