

ಬಸವಕಲ್ಯಾಣ: ಮಾನವ ಹಕ್ಕುಗಳ ಕುರಿತು ತಿಳಿವಳಿಕೆ ಅಗತ್ಯವಾಗಿದ್ದು, ಅವುಗಳನ್ನು ಅರಿತು ಪಾಲನೆ ಮಾಡಿದರೆ ಸಮಾಜದಲ್ಲಿ ಸಾಮರಸ್ಯ ಗಟ್ಟಿಗೊಳಿಸಲು ಸಾಧ್ಯವಿದೆ ಎಂದು ಪುಣ್ಯಕೋಟಿ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಪ್ರೊ.ಸೂರ್ಯಕಾಂತ ಶೀಲವಂತ ಹೇಳಿದರು.
ನಗರದ ಪುಣ್ಯಕೋಟಿ ಪದವಿಪೂರ್ವ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆಯಲ್ಲಿ ಮಾತನಾಡಿ, ಹಕ್ಕು ಮತ್ತು ಕರ್ತವ್ಯದ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಂಡು ಪಾಲನೆ ಮಾಡಿದರೆ ಪ್ರಗತಿ ಜತೆಗೆ ಘನತೆ-ಗೌರವದ ಬದುಕು ಕಟ್ಟಿಕೊಳ್ಳಬಹುದು ಎಂದು ಅಭಿಪ್ರಾಯಪಟ್ಟರು.
ರಾಜ್ಯಶಾಸ್ತ್ರ ಉಪನ್ಯಾಸಕ ಕಿಶೋರಕುಮಾರ ಕುಲಕರ್ಣಿ ಉಪನ್ಯಾಸ ನೀಡಿದರು. ಪ್ರತಿಭಾ ಸ್ವಾಗತಿಸಿದರು. ಮಾಲಾಶ್ರೀ ವಂದಿಸಿದರು. ಉಪನ್ಯಾಸಕಿ ಸ್ವಪ್ನಾ ಮರಬಗೆ ನಿರೂಪಣೆ ಮಾಡಿದರು.