

ಬೀದರ್: ಭಾರತೀಯ ವೈದ್ಯಕೀಯ ಸಂಘ(ಐಎಂಎ)ದ ರಾಜ್ಯ ವಿದ್ಯಾರ್ಥಿ ಸಂಘದ ಜಂಟಿ ಕಾರ್ಯದರ್ಶಿಯಾಗಿ ಇಲ್ಲಿಯ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಂತಿಮ ವರ್ಷದ ವಿದ್ಯಾರ್ಥಿ, ಚಿಟಗುಪ್ಪ ತಾಲ್ಲೂಕಿನ ಕರಕನಳ್ಳಿಯ ಶ್ರೇಯಸ್ ರೆಡ್ಡಿ ಮೋಹನ್ ರೆಡ್ಡಿ ಎಲಚಲ್ ಅವರನ್ನು ನೇಮಕ ಮಾಡಲಾಗಿದೆ.
ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಅಧ್ಯಕ್ಷ ಡಾ. ಶ್ರೀನಿವಾಸ್ ಎಸ್. ಈ ನೇಮಕ ಮಾಡಿದ್ದಾರೆ.
ಸನ್ಮಾನ: ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ನೇಮಕಗೊಂಡ ಶ್ರೇಯಸ್ ರೆಡ್ಡಿ ಅವರನ್ನು ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಸಂಸ್ಥೆಯ ನಿರ್ದೇಶಕ ಡಾ. ಶಿವಕುಮಾರ ಶೆಟಕಾರ್ ಸನ್ಮಾನಿಸಿದರು. ಇಎನ್‍ಟಿ ಎಚ್‍ಒಡಿ ಡಾ. ಸುಮನ್ ಕಣಜಿಕರ್ ಇದ್ದರು.