

ಬೀದರ್: ವೀರಶೈವ ಲಿಂಗಾಯತ ಸಮಾಜದ ಸಂಘಟನೆಗಾಗಿ ಡಿ.23 ಮತ್ತು 24ರಂದು ದಾವಣಗೆರೆಯ ಎಂಬಿಎ ಕಾಲೇಜು ಮೈದಾನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಅಧಿವೇಶನ ಹಮ್ಮಿಕೊಳ್ಳಲಾಗಿದೆ ಎಂದ ಮಹಾಸಭಾ ಜಿಲ್ಲಾಧಕ್ಷ ಡಾ.ವೈಜಿನಾಥ ಕಮಠಾಣೆ ತಿಳಿಸಿದ್ದಾರೆ.
ಮಹಾಸಭಾ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ಮತ್ತು ರಾಜ್ಯಾಧ್ಯಕ್ಷ ಎನ್.ತಿಪ್ಪಣ್ಣ ನೇತೃತ್ವದಲ್ಲಿ ಅಧಿವೇಶನ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ 10 ಸಾವಿರ ಜನ ಭಾಗವಹಿಸಲಿದ್ದಾರೆ. ಅಧಿವೇಶನಕ್ಕೆ ಆಗಮಿಸುವವರು ಡಿ.20 ರೊಳಗಾಗಿ ಹೆಸರು ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗಾಗಿ ತಾಲೂಕು ಅಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರನ್ನು ಸಂಪರ್ಕಿಸಬೇಕು ಎಂದು ತಿಳಿಸಿದಾರೆ.