

ಬೀದರ್: ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಲು ಸಾಧ್ಯ. ಹೀಗಾಗಿ ವಿದ್ಯಾರ್ಥಿಗಳು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕ್ಷೇತ್ರ ದೈಹಿಕ ಶಿಕ್ಷಣ ಅಧಿಕಾರಿ ಎ.ಕೆ. ಜೋಶಿ ಹೇಳಿದರು.
ಗೋರನಳ್ಳಿ ಬಳಿಯ ಶರಣಬಸವ ಪಬ್ಲಿಕ್ ಸ್ಕೂಲ್ ನಲ್ಲಿ ಆಯೋಜಿಸಿದ್ದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ಕ್ರೀಡೆಯನ್ನು ಸ್ಪರ್ಧಾ ಮನೋಭಾವದಿಂದ ಸ್ವೀಕರಿಸಿದಾಗ ಮಾತ್ರ ಸೋಲು-ಗೆಲುವು ಸಮಾನವಾಗಿ ಕಾಣಬಹುದು ಎಂದರು.
ಪ್ರಾಚಾರ್ಯ ಡಾ.ಸತೀಶ್ ಪ್ರತಾಪುರ ಮಾತನಾಡಿ, ಶರಣಬಸವ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಪೂಜ್ಯ ಡಾ.ಶರಣಬಸವಪ್ಪ ಅಪ್ಪ, ಮಾತೋಶ್ರೀ ಡಾ.ದಾಕ್ಷಾಯಿಣಿ ಅಪ್ಪ, ಚಿ.ದೊಡ್ಡಪ್ಪ ಅಪ್ಪ ಕೃಪಾಶೀವರ್ಾದ, ಸಂಸ್ಥೆ ಕಾರ್ಯದರ್ಶಿ ಬಸವರಾಜ ದೇಶಮುಖ ಮಾರ್ಗದರ್ಶನದಲ್ಲಿ ಕ್ರೀಡಾಕೂಟ ಸಂಘಟಿಸಲಾಗಿದೆ ಎಂದು ತಿಳಿಸಿದರು.
ಲಿಂಗರಾಜಪ್ಪ ಅಪ್ಪ ಇಂಜಿನಿಯರಿಂಗ್ ಕಾಲೇಜು ಪ್ರಾಚಾರ್ಯೆ ಡಾ.ವಿನಿತಾ ಪಾಟೀಲ್, ದೈಹಿಕ ಶಿಕ್ಷಣಾಧಿಕಾರಿ ನಾಗನಾಥ ಬಿರಾದಾರ ಇತರರಿದ್ದರು.