

ಬೀದರ್: ತೆಲಂಗಾಣದ ನೂತನ ಮುಖ್ಯಮಂತ್ರಿ ರೇವಂತರೆಡ್ಡಿ ಅವರನ್ನು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೈದರಾಬಾದ್ ನಲ್ಲಿ ಭೇಟಿಯಾಗಿ ಸನ್ಮಾನಿಸಿ ಅಭಿನಂದಿಸಿದರು.
ಈ ಹಿಂದೆ ಸಂಸದರಾಗಿದ್ದ ರೇವಂತರೆಡ್ಡಿ ನನ್ನ ಆತ್ಮೀಯ ಸ್ನೇಹಿತರು. ನವದೆಹಲಿಯಲ್ಲಿ ಅಧಿವೇಶನ ಇತರ ಕಚೇರಿ ಕೆಲಸಗಳಿಗೆ ಸಂಬಂಧಿಸಿದಂತೆ ಸಾಕಷ್ಟು ಸಲ ನಾನು ಮತ್ತು ಅವರು ಒಟ್ಟಾಗಿ ಪ್ರಯಾಣ ಮಾಡಿದ್ದೇವೆ. ಇಂದು ಮುಖ್ಯಮಂತ್ರಿಯಾಗಿದ್ದು ಸಂತಸ ತಂದಿದೆ ಎಂದು ಹೇಳಿದರು.
ರಾಸಾಯನಿಕ, ರಸಗೊಬ್ಬರ ಮತ್ತು ನವೀಕರಿಸಬಹುದಾದ ಇಂಧನ ಮೂಲ ಸಚಿವಾಲಯದ ಹಲವಾರು ವಿಷಯಗಳ ಕುರಿತು ಅವರೊಂದಿಗೆ ಸುದೀರ್ಘವಾಗಿ ಚರ್ಚಿಸಿ ತೆಲಂಗಾಣ ಸರ್ಕಾರದಿಂದ ಅಗತ್ಯ ಸಹಕಾರ ನೀಡುವಂತೆ ಕೋರಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಖೂಬಾ ಹೇಳಿದ್ದಾರೆ.