

ಬೀದರ್: ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕವು ರಾಜ್ಯಮಟ್ಟದ ಸಾವಿತ್ರಿಬಾಯಿ ಫುಲೆ ಸೇವಾ ರತ್ನ, ಶೇಖ ಫಾತಿಮಾ ಶಿಕ್ಷಕಿ ಸೇವಾ ರತ್ನ ಹಾಗೂ ರಮಾಬಾಯಿ ಅಂಬೇಡ್ಕರ್ ಆದರ್ಶ ದಂಪತಿ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ.
ಶಿಕ್ಷಣ, ಆರೋಗ್ಯ, ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ ಜನವರಿ 7 ರಂದು ಬೀದರ್‍ನಲ್ಲಿ ನಡೆಯಲಿರುವ ಸಾವಿತ್ರಿಬಾಯಿ ಫುಲೆ, ಶೇಖ್ ಫಾತಿಮಾ ಹಾಗೂ ರಮಾಬಾಯಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಾಂಡುರಂಗ ಬೆಲ್ದಾರ್ ತಿಳಿಸಿದ್ದಾರೆ.
ಮೈಲೂರಿನ ಸರ್ಕಾರಿ ಕನ್ಯಾ ಪ್ರೌಢಶಾಲೆಯ ಸಹ ಶಿಕ್ಷಕ ಕಲಾಲ್ ದೇವಿಪ್ರಸಾದ್ ಅವರಿಗೆ ಡಿಸೆಂಬರ್ 31 ರ ಒಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9449411557, 9535747581 ಅಥವಾ 9972684985ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.