ಬೀದರ್ ವಿವಿಗೆ ಹೆಬ್ಬಾಳೆ ನಾಮನಿರ್ದೇಶನ

Dr Jagnath Hebbale
Published on

ಬೀದರ್: ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ, ಕರ್ನಾಟಕ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಜಗನ್ನಾಥ ಹೆಬ್ಬಾಳೆ ಅವರನ್ನು ಬೀದರ್ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಆಗಿ ನಾಮನಿರ್ದೇಶನ ಮಾಡಲಾಗಿದೆ.
ಈ ಕುರಿತು ವಿವಿ ಕುಲಸಚಿವರು ಅಧಿಸೂಚನೆ ಹೊರಡಿಸಿ, ಹೆಬ್ಬಾಳೆ ಅವರನ್ನು ಎರಡು ವರ್ಷ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಡೀನ್ ಆಗಿ ನಾಮನಿರ್ದೇಶನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net