ಶಿವಶರಣಪ್ಪ ವಾಲಿಗೆ ವಿಶ್ವೇಶ್ವರಯ್ಯ ಪ್ರಶಸ್ತಿ

shivsharanappa wali
Published on

ಬೀದರ್: ಜೀವಮಾನ ಸಾಧನೆಗಾಗಿ ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ ಅವರಿಗೆ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ ದೊರಕಿದೆ.
ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಬೆಂಗಳೂರು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಶನಿವಾರ ಸಂಜೆ 5ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಹಿಂಭಾಗದ ಜೆಸಿ ರಸ್ತೆಯ ಸಂಸ ಬಯಲು ರಂಗಮಂದಿರದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಗಣ್ಯರು, ಪೂಜ್ಯರು ಪಾಲ್ಗೊಳ್ಳಲಿದ್ದಾರೆ. ಸುಮಾರು ಆರು ದಶಕ ಪತ್ರಿಕಾ ರಂಗದಲ್ಲಿ ವಾಲಿ ಮಾಡಿರುವ ಅನುಪಮ ಸೇವೆ ಗುರುತಿಸಿ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net