ರಾಜ್ಯಮಟ್ಟದ ಕಲಾ ಪ್ರತಿಭೋತ್ಸವ

Deelip Kadwad - Copy
Published on

ಬೀದರ್: ಕಾಡವಾದದ ಜೀವನ ಪ್ರಕಾಶ ಕಲ್ಚರಲ್ ಆ್ಯಂಡ್ ವೆಲ್‍ಫೇರ್ ಸೊಸೈಟಿಯು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ಇಲ್ಲಿಯ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಜ. 2 ರಂದು ಬೆಳಿಗ್ಗೆ 11ಕ್ಕೆ ವಿಶೇಷ ಚೇತನ ಕಲಾವಿದರ ರಾಜ್ಯಮಟ್ಟದ ಕಲಾ ಪ್ರತಿಭೋತ್ಸವ ಹಮ್ಮಿಕೊಂಡಿದೆ.
ಭಾಲ್ಕಿಯ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದ್ದೇವರು, ಶಹಾಪುರ ಗೇಟ್‍ನ ಕೆಥೊಲಿಕ್ ಚರ್ಚ್‍ನ ಫಾದರ್ ವಿಲ್ಸನ್ ಫರ್ನಾಂಡೀಸ್ ಸಾನಿಧ್ಯ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸುವರು. ಜನಪ್ರತಿನಿಧಿಗಳು, ಅಧಿಕಾರಿಗಳು, ಗಣ್ಯರು ಹಾಗೂ ಕಲಾವಿದರು ಪಾಲ್ಗೊಳ್ಳುವರು ಎಂದು ಜೀವನ ಪ್ರಕಾಶ ಕಲ್ಚರಲ್ ಆ್ಯಂಡ್ ವೆಲ್‍ಫೇರ್ ಸೊಸೈಟಿ ಅಧ್ಯಕ್ಷ ದಿಲೀಪ್ ಕಾಡವಾದ ತಿಳಿಸಿದ್ದಾರೆ.
ವಿಚಾರ ಸಂಕಿರಣ, ಸಾಧಕರಿಗೆ ವಿಶೇಷ ಸನ್ಮಾನ ಹಾಗೂ ಕಲಾವಿದರಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಲಿವೆ ಎಂದು ಹೇಳಿದ್ದಾರೆ.
ಕಲಾವಿದರು, ಕಲಾ ಆಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net