ನೌಕರರ ಸಂಘದ ದಿನದರ್ಶಿಕೆ ಬಿಡುಗಡೆ

Calender Release
Published on

ಬೀದರ್: ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ 2024ನೇ ಸಾಲಿನ ದಿನದರ್ಶಿಕೆ, ಪಾಕೆಟ್ ಡೈರಿ ಹಾಗೂ ಎಕ್ಸಿಕ್ಯೂಟಿವ್ ಡೈರಿಯನ್ನು ನಗರದಲ್ಲಿ ಬಿಡುಗಡೆ ಮಾಡಲಾಯಿತು.
ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ದಿನದರ್ಶಿಕೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿರೀಶ್ ಬಡೋಲೆ ಎಕ್ಸಿಕ್ಯೂಟಿವ್ ಡೈರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಪಾಕೆಟ್ ಡೈರಿ ಬಿಡುಗಡೆ ಮಾಡಿದರು.
ಸಂಘದ ದಿನದರ್ಶಿಕೆ ಹಬ್ಬ ಹರಿ ದಿನ, ಸಾರ್ವತ್ರಿಕ ರಜೆ ಸೇರಿದಂತೆ ವರ್ಷದ ಸಮಗ್ರ ಮಾಹಿತಿ ಒಳಗೊಂಡಿದೆ. ಪಾಕೆಟ್ ಡೈರಿಯಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು, ಪತ್ರಿಕಾ ಕಚೇರಿಗಳ ದೂರವಾಣಿ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆ ಇರುವ ಕಾರಣ ನೌಕರರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಗೋವಿಂದ ರೆಡ್ಡಿ ತಿಳಿಸಿದರು.
ಸಂಘದಿಂದ ನೌಕರರಿಗೆ ಪ್ರತಿ ವರ್ಷದಂತೆ ಈ ವರ್ಷವೂ 10 ಸಾವಿರ ದಿನದರ್ಶಿಕೆ, 15 ಸಾವಿರ ಪಾಕೆಟ್ ಡೈರಿ ಹಾಗೂ 200 ಎಕ್ಸಿಕ್ಯೂಟಿವ್ ಡೈರಿಗಳನ್ನು ವಿತರಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ರಾಜೇಂದ್ರಕುಮಾರ ಗಂದಗೆ ತಿಳಿಸಿದರು.
ಜಿಲ್ಲಾ ಪಂಚಾಯಿತಿ ನೂತನ ಸಿಇಒ ಆಗಿ ಬಂದ ಪ್ರಯುಕ್ತ ಗಿರೀಶ್ ಬಡೋಲಿ ಅವರನ್ನು ಸತ್ಕರಿಸಲಾಯಿತು.
ಬೀದರ್ ಉಪ ವಿಭಾಗಾಧಿಕಾರಿ ಲವೀಶ್ ಓರ್ಡಿಯಾ, ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಬಸವರಾಜ ಜಕ್ಕಾ, ಉಪಾಧ್ಯಕ್ಷ ಮಾಣಿಕರಾವ್ ಪಾಟೀಲ, ಕಾರ್ಯದರ್ಶಿ ರಾಜಶೇಖರ ಮಂಗಲಗಿ, ಸಹ ಕಾರ್ಯದರ್ಶಿ ಮನೋಹರ ಕಾಶಿ, ಪ್ರಚಾರ ಕಾರ್ಯದರ್ಶಿ ಸಂಜೀವಕುಮಾರ ಸೂರ್ಯವಂಶಿ, ಬಸವಕಲ್ಯಾಣ ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಮೇತ್ರೆ, ಸಂತೋಷ ಚಲುವಾ, ನೀಲಕಂಠ ಬಿರಾದಾರ, ಸಂತೋಷಕುಮಾರ, ಭೀಮರಾವ್ ಹಡಪದ, ವೆಂಕಟ ಶಿಂಧೆ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net