ಶಿಕ್ಷಣದಿಂದ ಮಾತ್ರ ಅಭಿವೃದ್ಧಿ ಸಾಧ್ಯ

patriswamy school
Published on

ಔರಾದ್: ದೇಶದ ಅಭಿವೃದ್ಧಿ ಶಿಕ್ಷಣದಿಂದ ಮಾತ್ರ ಸಾಧ್ಯ. ಎಲ್ಲ ವರ್ಗದ ಜನರು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಶಾಸಕ ಪ್ರಭು ಚವ್ಹಾಣ್ ಹೇಳಿದರು.
ಪಟ್ಟಣದ ಪತ್ರಿಸ್ವಾಮಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಏರ್ಪಡಿಸಿದ್ದ ಶಾಲೆ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಜೀವನದಲ್ಲಿ ಸಮಯ ಪ್ರಜ್ಞೆ ಮತ್ತು ಶಿಸ್ತು ಮೈಗೂಡಿಸಿಕೊಳ್ಳಬೇಕು. ಉನ್ನತ ಹುದ್ದೆಗಳ ಗುರಿಯೊಂದಿಗೆ ವ್ಯಾಸಂಗ ಮಾಡಬೇಕು. ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿದರೆ ಮಾತ್ರ ಯಾವುದೇ ದೇಶ ಅಭಿವೃದ್ಧಿ ಪಥದಲ್ಲಿ ಸಾಗಲು ಸಾಧ್ಯ ಎಂದರು.
ಮಾಜಿ ಶಾಸಕ ಗುಂಡಪ್ಪ ಬಿರಾದಾರ ಮಾತನಾಡಿ, ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಶಾಲಾ-ಕಾಲೇಜು ತೆರೆಯಲಾಗಿದೆ ಎಂದು ತಿಳಿಸಿದರು.
ಜಿಪಂ ಮಾಜಿ ಸದಸ್ಯ ವಸಂತ ಬಿರಾದಾರ, ಸಂಸ್ಥೆ ಕಾರ್ಯದರ್ಶಿ ಆರತಿ ಬಿರಾದಾರ, ಸದಸ್ಯೆ ನಾಗಮ್ಮ ಬಿರಾದಾರ್, ಬಿಜೆಪಿ ತಾಲೂಕು ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ, ಪಿಯು ಕಾಲೇಜಿನ ಪ್ರಾಂಶುಪಾಲ ಅಖಿಲ್, ಡಿ ಫಾರ್ಮಸಿ ಪ್ರಾಂಶುಪಾಲ ರಿಜ್ವಾನ್, ಆಡಳಿತಾಧಿಕಾರಿ ಅನೀಲ, ಬಸವರಾಜ ಬಿರಾದಾರ, ಉಷಾ ಬಿರಾದಾರ ಇತರರಿದ್ದರು.
ಧನಾಜಿ ರೋಡೆ ಸ್ವಾಗತಿಸಿ ನಿರೂಪಣೆ ಮಾಡಿದರು. ನಂತರ ವಿದ್ಯಾರ್ಥಿಗಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆದವು. ಪತ್ರಿಸ್ವಾಮಿ ಶಾಲೆ-ಕಾಲೇಜಿನಲ್ಲಿ ವ್ಯಾಸಂಗ ಮಾಡಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 40ಕ್ಕೂ ಅಧಿಕ ಹಳೆಯ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net