

ಬೀದರ್: ನಗರದ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಬಳಕೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯು ಜ. 5 ರಂದು ನಡೆಸಲು ಉದ್ದೇಶಿಸಿದ್ದ ಬೀದರ್ ನಗರಸಭೆ ಮುತ್ತಿಗೆಯನ್ನು ಮುಂದೂಡಿದೆ.
ಕಾರಣಾಂತರಗಳಿಂದ ಮುತ್ತಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕ ಪ್ರಕಟಿಸಲಾಗುವುದು ಎಂದು ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ ತಿಳಿಸಿದ್ದಾರೆ.