

ಬೀದರ್: ನಗರದ ಪ್ರತಾಪನಗರದ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಜ. 7 ರಂದು ಮಧ್ಯಾಹ್ನ 3ಕ್ಕೆ ಸಾವಿತ್ರಿಬಾಯಿ ಫುಲೆ, ಶೇಕ್ ಫಾತಿಮಾ ಹಾಗೂ ರಮಾಬಾಯಿ ಅಂಬೇಡ್ಕರ್ ಜಯಂತಿ ನಿಮಿತ್ತ ರಾಜ್ಯಮಟ್ಟದ ಸಾವಿತ್ರಿಬಾಯಿ ಫುಲೆ, ಶೇಕ್ ಫಾತಿಮಾ ಶಿಕ್ಷಣ ಸೇವಾ ರತ್ನ, ರಮಾಬಾಯಿ ಅಂಬೇಡ್ಕರ್ ಆದರ್ಶ ದಂಪತಿ ಪ್ರಶಸ್ತಿ ಪ್ರದಾನ, ದಿನದರ್ಶಿಕೆ ಹಾಗೂ ಪಾಕೆಟ್ ಡೈರಿ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ವಿಕಾಸ ಪರಿಷತ್ ಸಹಯೋಗದಲ್ಲಿ ನಡೆಯಲಿರುವ ಸಮಾರಂಭವನ್ನು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ಉದ್ಘಾಟಿಸುವರು ಎಂದು ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಾಂಡುರಂಗ ಬೆಲ್ದಾರ್ ತಿಳಿಸಿದ್ದಾರೆ.
ಆಣದೂರಿನ ಭಂತೆ ಜ್ಞಾನಸಾಗರ ಸಾನಿಧ್ಯ ವಹಿಸುವರು. ವಿಧಾನ ಪರಿಷತ್ ಸದಸ್ಯ ಚಂದ್ರಶೇಖರ ಪಾಟೀಲ ದಿನದರ್ಶಿಕೆ, ಮಾಜಿ ಸದಸ್ಯ ಶರಣಪ್ಪ ಮಟ್ಟೂರ ಪಾಕೆಟ್ ಡೈರಿ ಬಿಡುಗಡೆ ಮಾಡುವರು. ಉಪನ್ಯಾಸಕ ಶಿವಶರಣಪ್ಪ ಹುಗ್ಗಿ ಪಾಟೀಲ ವಿಶೇಷ ಉಪನ್ಯಾಸ ನೀಡುವರು ಎಂದು ಹೇಳಿದ್ದಾರೆ.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗಿರೀಶ್ ಬಡೋಲೆ, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ರಾಜೇಂದ್ರಕುಮಾರ ಗಂದಗೆ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವೆಂಕಟೇಶ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ, ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.