

ಹುಮನಾಬಾದ್: ಮುಂಬರುವ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಲೋಕಸಭೆ ಚುನಾವಣೆ ಚಟುವಟಿಕೆಗಳ ಕಾರ್ಯತಂತ್ರ ಕುರಿತು ಚರ್ಚಿಸಲು ಬಾಕ್ಲ್ ಕಾಂಗ್ರೆಸ್ನಿಂದ ಚಿಂತನ ಮಂಥನ ಸಭೆ ಹಾಗೂ ಕಾರ್ಯಕರ್ತರ ಸಮಾವೇಶ ಪಟ್ಟಣದ ಶ್ರೀ ವೀರಭದ್ರೇಶ್ವರ ದೇವಸ್ಥಾನ ಹತ್ತಿರದ ಬಸವರಾಜ ಪಾಟೀಲ್ ಕಲ್ಯಾಣ ಮಂಟಪದಲ್ಲಿ ಮಂಗಳವಾರ (ಜ.9ರಂದು) ಬೆಳಗ್ಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ.
ಮಾಜಿ ಸಚಿವ ರಾಜಶೇಖರ ಪಾಟೀಲ್ ಅಧ್ಯಕ್ಷತೆಯ ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ್, ಭೀಮರಾವ ಪಾಟೀಲ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಅಭಿಷೇಕ ಪಾಟೀಲ್ ಭಾಗವಹಿಸುವರು. ಕ್ಷೇತ್ರದ ಪಕ್ಷದ ವಿವಿಧ ಘಟಕ ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಫ್ಸರ್ಮಿಯಾ, ಗ್ರಾಮೀಣ ಬ್ಲಾಕ್ ಅಧ್ಯಕ್ಷ ಓಂಕಾರ ತುಂಬಾ ಕೋರಿದ್ದಾರೆ.