ವಿವೇಕರ ಆದರ್ಶ ಮೈಗೂಡಿಸಿಕೊಳ್ಳಿ

Gurukul
Published on

ಭಾಲ್ಕಿ: ಸ್ವಾಮಿ ವಿವೇಕಾನಂದರ ಆದರ್ಶ ಮತ್ತು ಸಂದೇಶ ಪ್ರತಿಯೊಬ್ಬರಿಗೂ ಸೂತ್ರ್ಫಿಯಾಗಿದ್ದು, ಉತ್ತಮ ವ್ಯಕ್ತಿತ್ವ ಮತ್ತು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು ಎಂದು ಹಿರೇಮಠ ಸಂಸ್ಥಾನದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು ಸಲಹೆ ನೀಡಿದರು.
ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದ ಜಯಂತ್ಯುತ್ಸವದಲ್ಲಿ ಮಾತನಾಡಿ, ಜಗತ್ತಿನಲ್ಲೇ ಭಾರತ ಅತ್ಯಧಿಕ ಯುವ ಸಮೂಹ ಹೊಂದಿದೆ. ಯುವಶಕ್ತಿ ದೇಶದ ಅಭಿವೃದ್ಧಿಗೆ ಸರಿಯಾಗಿ ಬಳಕೆಯಾಗಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಉತ್ತಮ ಆಲೋಚನೆ ರೂಢಿಸಿಕೊಳ್ಳಬೇಕು. ಪರೀಕ್ಷಿಸುವ, ಪ್ರಶ್ನಿಸುವ ಗುಣ ಮೈಗೂಡಿಸಿಕೊಳ್ಳಬೇಕು. ಸಕಾರಾತ್ಮಕ ಚಿಂತನೆಗಳಿಂದ ಯಶಸ್ಸು ಸಾಧಿಸಲು ಸಾಧ್ಯ ಎಂದರು.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ, ಗುರುಕುಲ ಆಡಳಿತಾಧಿಕಾರಿ ಮೋಹನರಡ್ಡಿ, ನಿವೃತ್ತ ಎಇಇ ಸಿದ್ದಯ್ಯ ಕವಡಿಮಠ, ಉಪ ಪ್ರಾಚಾರ್ಯ ಸಿದ್ರಾಮ ಗೊಗ್ಗಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net