

ಬೀದರ್: ಕರ್ನಾಟಕ ಅಲ್ಪಸಂಖ್ಯಾತರ, ಹಿಂದುಳಿದವರ, ದಲಿತರ(ಅಹಿಂದ) ಒಕ್ಕೂಟದ ಬೀದರ್ ಜಿಲ್ಲಾ ಘಟಕದ ಅಧ್ಯಕ್ಷರಾಗಿ ತುಕಾರಾಮ ಚಿಮಕೋಡೆ ಹಾಗೂ ಕಾರ್ಯಾಧ್ಯಕ್ಷರಾಗಿ ಮಾಣಿಕಪ್ಪ ಲದ್ದೆ ಬರಿದಾಬಾದ್ ಅವರನ್ನು ನೇಮಕ ಮಾಡಲಾಗಿದೆ. ಒಕ್ಕೂಟದ ರಾಜ್ಯ ಅಧ್ಯಕ್ಷ ಪ್ರಭುಲಿಂಗ ಎಲ್. ದೊಡ್ಡಿಣಿ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಚಿಮಕೋಡ್ ಗ್ರಾಮದ ತುಕಾರಾಮ ಚಿಮಕೋಡೆ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳೊಂದಿಗೆ ಗುರುತಿಸಿಕೊಂಡಿದ್ದಾರೆ. ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರೀಯರಾಗಿದ್ದಾರೆ. ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು ಹಾಗೂ ದಲಿತರ ಹಿತ ರಕ್ಷಣೆಗೆ ಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಅವರಿಗೆ ಅಹಿಂದ ಒಕ್ಕೂಟದ ಜಿಲ್ಲೆಯ ಹೊಣೆ ಕೊಡಲಾಗಿದೆ.