

ಬೀದರ್: ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಿಸಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ರಾಷ್ಟ್ರೀಯ ಬಸವ ದಳದ ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಸಂಜೀವಕುಮಾರ ಪಿ. ಪಾಟೀಲ ಸಂತಸ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರದ ನಿರ್ಣಯ ಐತಿಹಾಸಿಕವಾಗಿದೆ. ಬಸವ ಭಕ್ತರಲ್ಲಿ ಸಂತಸದ ಅಲೆ ಸೃಷ್ಟಿಸಿದೆ ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರ ಬಸವಣ್ಣನವರ ಕಾರ್ಯ ಕ್ಷೇತ್ರ ಬಸವಕಲ್ಯಾಣದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪಿಸಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.