ರಾಮ ಮಂದಿರ ಉದ್ಘಾಟನೆ, ಮಠಾಧೀಶರು ಸಾಕ್ಷಿ

havgilingeshwar Shivacharya Ayodhya Photo
Published on

ಬೀದರ್: ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಹಾಗೂ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಜಿಲ್ಲೆಯ ಮಠಾಧೀಶರೂ ಸಾಕ್ಷಿಯಾದರು.
ಮೆಹಕರದ ರಾಜೇಶ್ವರ ಶಿವಾಚಾರ್ಯ ಹಾಗೂ ಹಲಬರ್ಗಾದ ರಾಚೋಟೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಹಾವಗಿಲಿಂಗೇಶ್ವರ ಶಿವಾಚಾರ್ಯ ಅಯೋಧ್ಯೆಯಲ್ಲಿ ನಡೆದ ಸಮಾರಂಭದಲ್ಲಿ ಪಾಲ್ಗೊಂಡರು.
ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‍ನ ಆಹ್ವಾನದ ಮೇರೆಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೇವು. ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದದ್ದು ನಮ್ಮ ಸುದೈವ ಎಂದು ಹಾವಗಿಲಿಂಗೇಶ್ವರ ಶಿವಾಚಾರ್ಯ ತಿಳಿಸಿದರು.
ಹಿಂದೂಗಳ 500 ವರ್ಷಗಳ ರಾಮ ಮಂದಿರದ ಕನಸು ನನಸಾಗಿದೆ. ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾನ ಆಗಿದೆ. ಅಷ್ಟು ಮಾತ್ರವಲ್ಲದೆ, ದೇಶದ ಪ್ರತಿ ಮನೆ, ಮನಗಳಲ್ಲೂ ರಾಮ ನೆಲೆಸಿದ್ದಾನೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net