ಸಿದ್ಧಾರೂಢ ಕಾಲೇಜಿನಲ್ಲಿ ಮತದಾರರ ದಿನಾಚರಣೆ

Siddharoodh College Photo
Published on

ಬೀದರ್: ನಗರದ ಸಿದ್ಧಾರೂಢ ಮಹಿಳಾ ಪದವಿ ಕಾಲೇಜಿನಲ್ಲಿ ಗುರುವಾರ ರಾಷ್ಟ್ರೀಯ ಮತದಾರರ ದಿನ ಆಚರಿಸಲಾಯಿತು.
ಕಡ್ಡಾಯ ಮತದಾನದಿಂದ ಸದೃಢ ರಾಷ್ಟ್ರ ನಿರ್ಮಾಣ ಸಾಧ್ಯವಿದೆ. ಉತ್ತಮ ಪ್ರತಿನಿಧಿಗಳ ಆಯ್ಕೆಗೆ ಪ್ರತಿಯೊಬ್ಬರೂ ಯೋಚಿಸಿ ಮತದಾನ ಮಾಡಬೇಕು ಎಂದು ಚಿದಂಬರ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಡಾ. ಹಾವಗಿರಾವ್ ಮೈಲಾರೆ ಹೇಳಿದರು.
ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೆ ಮತ ಚಲಾಯಿಸಬೇಕು ಎಂದು
ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಪ್ರೊ. ಡಿ.ಎಂ. ಮದರಿ ತಿಳಿಸಿದರು.
ಪ್ರಾಚಾರ್ಯ ನಾಗಪ್ಪ ಜಾನಕನೋರ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದರು.
ಮತದಾನ ಕುರಿತ ಪ್ರಬಂಧ ಸ್ಪರ್ಧೆಯಲ್ಲಿ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಗಳಿಸಿದ ಉಷಾರಾಣಿ ಪ್ರಕಾಶ, ಸುಮಾ ಗಾಂಧಿ ಹಾಗೂ ಲಕ್ಷ್ಮಿ ವೈಜಿನಾಥ ಅವರಿಗೆ ಬಹುಮಾನ ವಿತರಿಸಲಾಯಿತು.
ಗಾಯತ್ರಿ, ಉಪನ್ಯಾಸಕರಾದ ಈಶ್ವರ ರೆಡ್ಡಿ, ಡಾ. ಪಂಡಿತ ಗಂಗಶೆಟ್ಟಿ, ಶಂಕರ, ರಾಮ ಜಮಾದಾರ್, ವೆಂಕಟ, ಮಂಗಲಾ, ರಾಖಿ, ರಾಜಮ್ಮ, ಸಪ್ನಾ, ಶೀಲತಾ, ಅರ್ಚನಾ, ಆಕಾಶ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net