ಜನಸೇವಾ ಸೃಜನಾತ್ಮಕ ತರಬೇತಿ ಕೇಂದ್ರ ಉದ್ಘಾಟನೆ

Janseva School
Published on

ಬೀದರ್: ಇಲ್ಲಿಯ ಪ್ರತಾಪನಗರದ ಜನಸೇವಾ ಪ್ರಾಥಮಿಕ ಹಾಗೂ ಪ್ರೌಢಶಾಲೆ ಆವರಣದಲ್ಲಿ ಜನ ಸೇವಾ ಸೃಜನಾತ್ಮಕ ತರಬೇತಿ ಕೇಂದ್ರವನ್ನು ಕೇಂದ್ರದ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಉದ್ಘಾಟಿಸಿದರು.
ಪ್ರಸ್ತುತ ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರವೂ ಬಹಳ ಅಗತ್ಯವಾಗಿದೆ. ಸಂಸ್ಕಾರದಿಂದಲೇ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯವಿದೆ ಎಂದು ಅವರು ಹೇಳಿದರು.
ಜನಸೇವಾ ಶಾಲೆಯಲ್ಲಿ ಭಾರತೀಯ ಸಂಸ್ಕøತಿ ಆಧಾರಿತ ಶಿಕ್ಷಣ ಕೊಡುತ್ತಿರುವುದು ಪ್ರಶಂಸನೀಯ. ತರಬೇತಿ ಕೇಂದ್ರ ಬರುವ ದಿನಗಳಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಬಲ ತುಂಬುವ ಕೆಲಸ ಮಾಡಲಿದೆ ಎಂದು ಆಶಯ ವ್ಯಕ್ತಪಡಿಸಿದರು.
ಪ್ರೊ. ಬಿ.ಜಿ. ಮೂಲಿಮನಿ ಫೌಂಡೇಷನ್ ಧನ ಸಹಾಯದೊಂದಿಗೆ ಜನಸೇವಾ ಪ್ರತಿಷ್ಠಾನದ ಅಡಿಯಲ್ಲಿ ತರಬೇತಿ ಕೇಂದ್ರ ಶುರು ಮಾಡಲಾಗಿದೆ. 100 ಜನ ಒಟ್ಟಿಗೆ ಕುಳಿತುಕೊಳ್ಳಬಹುದಾದಷ್ಟು ವಿಶಾಲ ಸ್ಥಳಾವಕಾಶ ಇದೆ. ಬರುವ ದಿನಗಳಲ್ಲಿ ಕೇಂದ್ರವು ವಿವಿಧ ತರಬೇತಿಗಳಿಗೆ ವೇದಿಕೆಯಾಗಲಿದೆ ಎಂದು ಜನಸೇವಾ ಪ್ರತಿಷ್ಠಾನದ ಕಾರ್ಯದರ್ಶಿ ರೇವಣಸಿದ್ದಪ್ಪ ಜಲಾದೆ ಹೇಳಿದರು.
ಗುಲಬರ್ಗಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಬಿ.ಜಿ. ಮೂಲಿಮನಿ ಅವರನ್ನು ಸನ್ಮಾನಿಸಲಾಯಿತು.
ನಿವೃತ್ತ ಕರ್ನಲ್ ಶರಣಪ್ಪ ಸಿಕೇನಪುರ, ಜನಸೇವಾ ಪ್ರತಿಷ್ಠಾನದ ಅಧ್ಯಕ್ಷ ಬಸವರಾಜ ಸ್ವಾಮಿ, ಉಪಾಧ್ಯಕ್ಷ ಕಾಶೀನಾಥ ಕಾಡವಾದ, ಖಜಾಂಚಿ ಶಿವರಾಜ ಹುಡೇದ್, ಆಡಳಿತ ಮಂಡಳಿ ಸದಸ್ಯ ಶಿವಲಿಂಗಪ್ಪ ಜಲಾದೆ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net