ಮಾತೆ ಡಾ. ಗಂಗಾದೇವಿಗೆ ಸನ್ಮಾನ

Maate Dr Gangadevi Sanman Photo
Published on

ಬೀದರ್: ರಾಜ್ಯ ಸರ್ಕಾರದ ಅಕ್ಕ ಮಹಾದೇವಿ ರಾಜ್ಯ ಪ್ರಶಸ್ತಿ ಪುರಸ್ಕøತ ಕೂಡಲಸಂಗಮದ ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಡಾ. ಗಂಗಾದೇವಿ ಅವರನ್ನು ರಾಷ್ಟ್ರೀಯ ಬಸವ ದಳದಿಂದ ಬೆಂಗಳೂರಿನಲ್ಲಿ ಸನ್ಮಾನಿಸಲಾಯಿತು.
ದಳದ ಪ್ರಮುಖರು ಶಾಲು ಹೊದಿಸಿ ಗೌರವಿಸಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ರಾಜೇಂದ್ರಕುಮಾರ ಗಂದಗೆ, ರಾಷ್ಟ್ರೀಯ ಬಸವ ದಳದ ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ, ಪ್ರಧಾನ ಕಾರ್ಯದರ್ಶಿ ಸುರೇಶಕುಮಾರ ಸ್ವಾಮಿ, ಜಿಲ್ಲಾ ಲಿಂಗಾಯತ ಸಮಾಜದ ಅಧ್ಯಕ್ಷ ಕುಶಾಲರಾವ್ ಪಾಟೀಲ ಖಾಜಾಪುರ, ಬಸವ ದಳದ ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಸಂಜೀವಕುಮಾರ ಪಾಟೀಲ, ಬಸವ ಧರ್ಮ ಪೀಠದ ಗಣನಾಯಕ ಕಂಟೆಪ್ಪ ಗಂದಿಗುಡಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net