ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ಸಿದ್ಧತೆ

dc office meeting
Published on

ಬೀದರ್: ರಾಜ್ಯ ಸರ್ಕಾರಿ ನೌಕರರ ಪ್ರಸಕ್ತ ಸಾಲಿನ ಎರಡು ದಿನಗಳ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯವರು ಕ್ರೀಡಾ ಸಾಮಗ್ರಿಗಳ ವ್ಯವಸ್ಥೆ ಮಾಡಬೇಕು. ನಗರಸಭೆ ಅಧಿಕಾರಿಗಳು ನೆಹರೂ ಕ್ರೀಡಾಂಗಣದಲ್ಲಿ ಸ್ವಚ್ಛತೆ ಕಾರ್ಯ ಕೈಗೊಳ್ಳಬೇಕು. ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಆರೋಗ್ಯ ಇಲಾಖೆ ವೈದ್ಯಕೀಯ ಸಿಬ್ಬಂದಿ ಹಾಗೂ ಆಂಬುಲನ್ಸ್ ನಿಯೋಜಿಸಬೇಕು ಎಂದು ತಿಳಿಸಿದರು.
ಪೊಲೀಸ್ ಇಲಾಖೆಯವರು ಬಂದೋಬಸ್ತ್ ಮಾಡಬೇಕು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಾಂಸ್ಕøತಿಕ ಕಾರ್ಯಕ್ರಮಗಳಿಗಾಗಿ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರ ಕಾದಿರಿಸಬೇಕು ಎಂದು ಹೇಳಿದರು.
ಶೀಘ್ರದಲ್ಲೇ ಕ್ರೀಡಾಕೂಟದ ದಿನಾಂಕ ನಿಗದಿಪಡಿಸಲಾಗುವುದು. ನೆಹರೂ ಕ್ರೀಡಾಂಗಣದಲ್ಲಿ ಕ್ರೀಡಾ ಸ್ಪರ್ಧೆಗಳು ಹಾಗೂ ರಂಗ ಮಂದಿರದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.
ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ನೌಕರರಿಗೆ ಸಂಘದಿಂದ ಟೊಪ್ಪಿಗೆ, ದೈಹಿಕ ಶಿಕ್ಷಕರಿಗೆ ಟೀ ಶರ್ಟ್ ಕೊಡಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಹೇಳಿದರು.
ಕ್ರೀಡಾಪಟುಗಳಿಗೆ ಎರಡು ದಿನ ಬೆಳಿಗ್ಗೆ ಉಪಾಹಾರ, ಚಹಾ, ಮಧ್ಯಾಹ್ನ ಹಾಗೂ ಸಂಜೆ ಊಟದ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಬಸವರಾಜ ಜಕ್ಕಾ, ಕ್ರೀಡಾ ಕಾರ್ಯದರ್ಶಿ ಸೊಹೇಲ್ ಅಹಮ್ಮದ್, ಸುಮತಿ ರುದ್ರಾ, ಗಣಪತಿ ಜಮಾದಾರ್, ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net