ಸೂರ್ಯವಂಶಿ ಚುನಾವಣೆ ಉಸ್ತುವಾರಿ

Amit Suryavanshi-1
Published on

ಬೀದರ್: ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಭಾಲ್ಕಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಅಮಿತ್ ಸೂರ್ಯವಂಶಿ ಅವರನ್ನು ನೇಮಕ ಮಾಡಲಾಗಿದೆ.
ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಆರ್. ಧರ್ಮಸೇನ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಯುವ ಮುಖಂಡ ಅಮಿತ್ ಸೂರ್ಯವಂಶಿ ಒಂದೂವರೆ ದಶಕದಿಂದ ಕಾಂಗ್ರೆಸ್ ಪಕ್ಷದಲ್ಲಿದ್ದಾರೆ. ಎನ್.ಎಸ್.ಯು.ಐ., ಪಕ್ಷದ ಯುವ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ಕಾರ್ಯಕಾರಿಣಿ ಸದಸ್ಯರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net