ಕಡ್ಯಾಳ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ

kadyal
Published on

ಬೀದರ್: ಜಿಲ್ಲಾ ಯುವ ಜನತಾ ದಳ (ಜಾತ್ಯತೀತ) ವಿಭಾಗದ ಅಧ್ಯಕ್ಷರಾಗಿ ಯುವ ಮುಖಂಡ ಜಾಫಟ್ ರಾಜು ಕಡ್ಯಾಳ ಅವರನ್ನು ನೇಮಕ ಮಾಡಲಾಗಿದೆ.
ಜಿಲ್ಲಾ ಜೆಡಿಎಸ್ ಅಧ್ಯಕ್ಷ ರಮೇಶ ಪಾಟೀಲ್ ಸೋಲಪುರ ಅವರ ಶಿಫಾರಸ್ಸಿನ ಮೇರೆಗೆ ಈ ನೇಮಕ ಮಾಡಲಾಗಿದೆ. ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ತತ್ವ, ಸಿದ್ಧಾಂತಗಳಿಗೆ ಬದ್ಧರಾಗಿ, ಪಕ್ಷದ ಯುವ ಮುಖಂಡರನ್ನು ಹಾಗೂ ಯುವ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯಲ್ಲಿ ಯುವ ವಿಭಾಗವನ್ನು ಪರಿಣಾಮಕಾರಿಯಾಗಿ ಸಂಘಟಿಸಿ ಬಲವರ್ಧನೆಗೊಳಿಸಬೇಕು ಎಂದು ನೇಮಕಾತಿ ಆದೇಶದಲ್ಲಿ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಸನ್ಮಾನ: ಜಿಲ್ಲಾ ಜೆಡಿಎಸ್ ಯುವ ವಿಭಾಗದ ಅಧ್ಯಕ್ಷರಾಗಿ ಜಾಫಟ್ ರಾಜು ಕಡ್ಯಾಳ್ ಅವರನ್ನು ನೇಮಕ ಮಾಡಿದ ಹಿನ್ನೆಲೆಯಲ್ಲಿ ನಗರದಲ್ಲಿ ಭಾನುವಾರ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ ಸನ್ಮಾನಿಸಿದರು.
ಕಳೆದ ಒಂದು ದಶಕದಿಂದ ಜಾಫಟ್ ಕಡ್ಯಾಳ ಪಕ್ಷದಲ್ಲಿ ಸಕ್ರಿಯರಾಗಿ ಕೆಲಸ ಮಾಡುತ್ತಿದ್ದಾರೆ. ಇವರ ಸೇವೆ ಪರಿಗಣಿಸಿ ಇದೀಗ ಪಕ್ಷ ಹೊಸ ಜವಾಬ್ದಾರಿ ನೀಡಿದೆ. ಜಿಲ್ಲಾದ್ಯಂತ ಪಕ್ಷವನ್ನು ಸಂಘಟಿಸಿ ಯುವ ಸಮೂಹವನ್ನು ಪಕ್ಷಕ್ಕೆ ಕರೆದುಕೊಂಡು ಬರಬೇಕು ಎಂದು ಖಾಶೆಂಪುರ ಹೇಳಿದರು.
ಜಿಲ್ಲಾಧ್ಯಕ್ಷ ರಮೇಶ ಪಾಟೀಲ್ ಸೋಲಪುರ, ರಾಜು ಕಡ್ಯಾಳ, ರಾಜಶೇಖರ ಜವಳಿ, ನಬಿ ಖುರೇಷಿ, ಪ್ರಸಾದ ಮನ್ನಳ್ಳಿ, ದಯಾ ಕಡ್ಯಾಳ, ಸಿ.ಎಂ. ದಾಸ್, ಗೌತಮ ಮಲ್ಲಿಗೆ ಇತರರಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net