ರೋಡ್ ಸ್ಪೀಡ್ ಬ್ರೇಕರ್ ನಿರ್ಮಾಣ

Road Speed Breaker At Near Noubad First Grade College Photo-1
Published on

ಬೀದರ್: ನಗರಸಭೆ ನಾಮ ನಿರ್ದೇಶಿತ ಸದಸ್ಯ ಸೂರ್ಯಕಾಂತ ಸಾಧುರೆ ಅವರ ಮನವಿ ಮೇರೆಗೆ ಲೋಕೋಪಯೋಗಿ ಇಲಾಖೆಯು ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಮೀಪದ ಬೀದರ್- ಭಾಲ್ಕಿ ಮುಖ್ಯ ರಸ್ತೆಯಲ್ಲಿ ಸ್ಪೀಡ್ ಬ್ರೇಕರ್ ನಿರ್ಮಿಸಿದೆ.
ಪಾದಚಾರಿಗಳು ಹಾಗೂ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಸ್ತೆಯ ಎರಡೂ ಬದಿಗಳಲ್ಲಿ ಸ್ಪೀಡ್ ಬ್ರೇಕರ್ ನಿರ್ಮಾಣ ಮಾಡಲಾಗಿದೆ ಎಂದು ಸೂರ್ಯಕಾಂತ ಸಾಧುರೆ ತಿಳಿಸಿದ್ದಾರೆ.
ಮುಖ್ಯ ರಸ್ತೆ ಸಮೀಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯಗಳಿವೆ. ನಿತ್ಯ ಸಾವಿರಾರು ವಿದ್ಯಾರ್ಥಿಗಳು ಸಂಚರಿಸುತ್ತಾರೆ. ವಾಹನಗಳು ವೇಗವಾಗಿ ಸಂಚರಿಸುವ ಕಾರಣ ಅಪಘಾತಗಳ ಸಾಧ್ಯತೆಗಳು ಇದ್ದವು. ಹೀಗಾಗಿ ಸ್ಪೀಡ್ ಬ್ರೇಕರ್ ನಿರ್ಮಿಸಲು  ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಮನವಿ ಸಲ್ಲಿಸಿದ್ದೆ ಎಂದು ತಿಳಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ತಮ್ಮ ಮನವಿ ಪತ್ರದೊಂದಿಗೆ ಸೂಕ್ತ ಕ್ರಮಕ್ಕಾಗಿ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಅವರಿಗೆ ಪತ್ರ ಬರೆದಿದ್ದರು. ಇದೀಗ ಸ್ಪೀಡ್ ಬ್ರೇಕರ್ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net