

ಬೀದರ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸುನೀಲಕುಮಾರ ಕಸ್ತೂರೆ ಅವರನ್ನು ನೇಮಕ ಮಾಡಲಾಗಿದೆ. ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜಕುಮಾರ ಮಾಳಗೆ ಈ ನೇಮಕ ಮಾಡಿದ್ದಾರೆ.
ಕಸ್ತೂರೆ ಕಮಲನಗರ ತಾಲ್ಲೂಕಿನ ಠಾಣಾಕುಶನೂರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ನಿರೀಕ್ಷಣಾ ಅಧಿಕಾರಿಯಾಗಿದ್ದಾರೆ.