ಕೆಪಿಸಿಸಿಗೆ ಜಾಗೀರದಾರ್ ನೇಮಕ

Sanjay Jagirdar-3
Published on

ಬೀದರ್: ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಂಜಯ್ ಜಾಗೀರದಾರ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ನೇಮಕಾತಿ ಆದೇಶ ಹೊರಡಿಸಿದ್ದಾರೆ.
ಜಾಗೀರದಾರ್, ರಾಜಕೀಯ ಜೀವನ ಆರಂಭಿಸಿದ್ದು ವಿದ್ಯಾರ್ಥಿ ಕಾಂಗ್ರೆಸ್‍ನಿಂದ. ಎನ್‍ಎಸ್‍ಯುಐ, ಕಾಂಗ್ರೆಸ್ ಯುವ ಘಟಕದ ಜಿಲ್ಲಾ ಘಟಕದ ಅಧ್ಯಕ್ಷ, ಯುವ ಘಟಕದ ರಾಜ್ಯ ಘಟಕದ ಕಾರ್ಯದರ್ಶಿ, ಕಾಂಗ್ರೆಸ್ ಜಿಲ್ಲಾ ಘಟಕದ ಕಾರ್ಯದರ್ಶಿಯಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದಾರೆ. ಅದರಿಂದಾಗಿ ಅವರಿಗೆ ಈಗ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆ ಒಲಿದು ಬಂದಿದೆ.
ತಮ್ಮನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಕ್ಕೆ ಜಾಗೀರದಾರ್ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಜಿಲ್ಲೆಯ ಸಚಿವರು ಹಾಗೂ ಹಿರಿಯ ಮುಖಂಡರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net