

ಬೀದರ್: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಏ.14ರಂದು ಬೆಳಗ್ಗೆ 10ಕ್ಕೆ ಮಾಧವನಗರ ನಿವಾಸದಲ್ಲಿ ಡಾ.ಗುರುಪಾದಪ್ಪ ನಾಗಮಾರಪಳ್ಳಿ ಬೆಂಬಲಿಗರು, ಹಿತೈಷಿಗಳು ಮತ್ತು ಕಾರ್ಯಕರ್ತರ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡ ಸೂರ್ಯಕಾಂತ ನಾಗಮಾರಪಳ್ಳಿ ತಿಳಿಸಿದ್ದಾರೆ.
ಚುನಾವಣೆ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಬೀದರ್, ಔರಾದ್, ಭಾಲ್ಕಿ ಸೇರಿ ಲೋಕಸಭಾ ವ್ಯಾಪ್ತಿಯ ನಾಗಮಾರಪಳ್ಳಿ ಪರಿವಾರದ ಹಿತೈಷಿಗಳು, ಹಿರಿಯರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದ್ದಾರೆ.