ರಕ್ತದಾನ ಶಿಬಿರ 8ರಂದು

Rajkumar Malge - Copy
Published on

ಬೀದರ್: ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಸಂಘದ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಏಪ್ರಿಲ್ 8 ರಂದು ಬೆಳಿಗ್ಗೆ 10ಕ್ಕೆ ನಗರದ ಓಲ್ಡ್ ಸಿಟಿಯ ನೂರು ಹಾಸಿಗೆಗಳ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.
ರಕ್ತದಾನ ಮಾಡ ಬಯಸುವ ಜಿಲ್ಲೆಯ ಆರೋಗ್ಯ ಇಲಾಖೆಯ ನೌಕರರಿಗೆ ಶಿಬಿರದಲ್ಲಿ ಪಾಲ್ಗೊಳ್ಳಲು ಅನುಮತಿ ನೀಡುವಂತೆ ಈಗಾಗಲೇ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಇಲಾಖೆಯ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜಕುಮಾರ ಮಾಳಗೆ ತಿಳಿಸಿದ್ದಾರೆ.
ರಕ್ತದಾನ ಮಾನವೀಯ ಕಾರ್ಯವಾಗಿದೆ. ಜೀವ ಉಳಿಸಲು ನೆರವಾಗುತ್ತದೆ. ಹೀಗಾಗಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net