ಕಾಂಗ್ರೆಸ್ ವಿವಿಧ ವಿಭಾಗಗಳ ಪ್ರಮುಖರಿಂದ ಪ್ರಚಾರ

Congress Karmik & ST Wing Meet Sagar Khandre
Published on

ಬೀದರ್: ಕಾಂಗ್ರೆಸ್ ವಿವಿಧ ವಿಭಾಗಗಳ ರಾಜ್ಯ ಪ್ರಮುಖರು ಜಿಲ್ಲೆಯ ವಿವಿಧೆಡೆ ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಅವರ ಪರ ಪ್ರಚಾರ ನಡೆಸಿದರು.
ಕಾರ್ಮಿಕ ಹಾಗೂ ಪರಿಶಿಷ್ಟ ಪಂಗಡ ವಿಭಾಗದ ಪದಾಧಿಕಾರಿಗಳು ರಾಜ್ಯದ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಜನಜಾಗೃತಿ ಮೂಡಿಸಲು ಪಕ್ಷದ ಕಾರ್ಯಕರ್ತರಿಗೆ ಸಲಹೆ ಮಾಡಿದರು.
ಭಾಲ್ಕಿಯಲ್ಲಿ ಸಾಗರ್ ಖಂಡ್ರೆ ಅವರನ್ನು ಭೇಟಿ ಮಾಡಿ, ಚುನಾವಣೆ ಕುರಿತು ಚರ್ಚೆ ನಡೆಸಿದರು. ಕಾರ್ಮಿಕ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂದೀಪ್ ರೆಡ್ಡಿ, ಕಾರ್ಯದರ್ಶಿ ರವಿಕಿರಣ, ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಕಾರ್ಯದರ್ಶಿ ರಾಜಕುಮಾರ ಕಂದಗೂಳೆ, ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ರಾಕೇಶ ಕುರುಬಖೇಳಗಿ, ಪ್ರಧಾನ ಕಾರ್ಯದರ್ಶಿ ಕನಕದಾಸ ಬಿರಾದಾರ ವಾಗಲಗಾಂವ್, ಪ್ರಶಾಂತ ಮೇತ್ರೆ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net