

ಬೀದರ್: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಭಾಲ್ಕಿ ಹಾಗೂ ಕಲಬುರಗಿ ಉತ್ತರ ವಿಧಾನಸಭೆ ಕ್ಷೇತ್ರದ ಸಂಯೋಜಕರಾಗಿ ಆನಂದ ದೇವಪ್ಪ ಅವರನ್ನು ನೇಮಕ ಮಾಡಲಾಗಿದೆ.
ತಕ್ಷಣ ಜವಾಬ್ದಾರಿ ವಹಿಸಿಕೊಂಡು ಲೋಕಸಭೆ ಕ್ಷೇತ್ರದ ಅಭ್ಯರ್ಥಿ, ಸ್ಥಳೀಯ ಜನಪ್ರತನಿಧಿಗಳು, ಮುಖಂಡರೊಂದಿಗೆ ಚುನಾವಣೆ ಕಾರ್ಯಗಳ ಬಲವರ್ಧನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿಜಯ ಮುಳಗುಂದ ಸೂಚಿಸಿದ್ದಾರೆ.