ವಕೀಲರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

bhalki
Published on

ಭಾಲ್ಕಿ: ಇಲ್ಲಿಯ ಹಿರೇಮಠ ಸಂಸ್ಥಾನದಲ್ಲಿ ವಕೀಲರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾದ ನೂತನ ಪದಾಧಿಕಾರಿಗಳನ್ನು ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು, ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಸನ್ಮಾನಿಸಿದರು.

ಅಧ್ಯಕ್ಷ ಸ್ಥಾನಕ್ಕೆ ಸಿದ್ರಾಮ ಗುರುನಾಥ ಪಾಟೀಲ, ಉಪಾಧ್ಯಕ್ಷ ಸ್ಥಾನಕ್ಕೆ ಶಿವಶಂಕರ ಶಿವಲಿಂಗಪ್ಪಾ ಲದ್ದೆ, ಕಾರ್ಯದರ್ಶಿ ಸ್ಥಾನಕ್ಕೆ ಪ್ರಭಾಕರ ನಾಗಶೆಟ್ಟಿ ಹಾಳೆ ಹಾಗೂ ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಸಾರಂಗ ಲಾಲಪ್ಪ ಸೂರ್ಯವಂಶಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. 

ಎಲ್ಲ ಸ್ಥಾನಗಳಿಗೆ ಕೇವಲ ಒಂದೊಂದೇ ನಾಮಪತ್ರ ಸಲ್ಲಿಕೆ ಆಗಿದ್ದರಿಂದ ಚುನಾವಣೆ ಅಧಿಕಾರಿಗಳಾದ ಸಂಜೀವಕುಮಾರ ಸಾಳಂಕೆ, ಶಿವಕುಮಾರ ಎಸ್.ಹರಪಳ್ಳೆ ಅವಿರೋಧ ಆಯ್ಕೆ ಘೋಷಿಸಿ ಪ್ರಮಾಣ ಪತ್ರ ವಿತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net