

ಬೀದರ್: ಜಾತಿಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿನೋದಕುಮಾರ ಅಪ್ಪೆ ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ವಿರುದ್ಧ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.
ಕಾಂಗ್ರೆಸ್ ಎರಡು-ಮೂರು ಜಾತಿಗಳ ಮತ ಪಡೆದು ಆಟವಾಡುತ್ತಿದೆ ಎಂದು ಖೂಬಾ ಅವರು ಚುನಾವಣಾ ಪ್ರಚಾರ ಸಭೆಗಳಲ್ಲಿ ಲಘುವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಖೂಬಾ ಅವರು ಹೇಳಿದ ಆ ಜಾತಿಗಳು ಯಾವವು, ಆ ಜಾತಿಗಳಿಗೆ ಬಿಜೆಪಿಯಲ್ಲಿ ಗೌರವ ಇದೆಯೋ, ಇಲ್ಲವೋ ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಖೂಬಾ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.