ಪಿಯುಸಿಯಲ್ಲಿ ಜಿಲ್ಲೆಗೆ ಒಂದಂಕಿ ಫಲಿತಾಂಶಕ್ಕೆ ಯತ್ನ

Sri Swamy Narendra College Puc Achievers Sanman programme photo - Copy
Published on

ಬೀದರ್: ಬರುವ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಯ ಫಲಿತಾಂಶ ಒಂದಂಕಿಯಲ್ಲಿ ತರಲು ಪ್ರಯತ್ನಿಸಲಾಗುವುದು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಕಾಂತ ಶಹಾಬಾದಕರ್ ಹೇಳಿದರು.
ಇಲ್ಲಿಯ ಶ್ರೀ ಸ್ವಾಮಿ ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಗ್ರಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಈ ವರ್ಷ ಜಿಲ್ಲೆಗೆ ಉತ್ತಮ ಫಲಿತಾಂಶ ಬಂದಿದೆ. ಎಲ್ಲ ಶಿಕ್ಷಣ ಸಂಸ್ಥೆಗಳು ಕೈಜೋಡಿಸಿದ್ದಲ್ಲಿ ಫಲಿತಾಂಶದಲ್ಲಿ ಇನ್ನಷ್ಟು ಸುಧಾರಣೆ ಕಾಣಬಹುದು ಎಂದು ಹೇಳಿದರು.
ವಿದ್ಯಾರ್ಥಿಗಳು ಜೀವನದಲ್ಲಿ ಸ್ಪಷ್ಟ ಗುರಿ ಇಟ್ಟುಕೊಳ್ಳಬೇಕು. ಕಠಿಣ ಪರಿಶ್ರಮದ ಮೂಲಕ ಅದನ್ನು ನನಸಾಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಕಾಂತ ಪಾಟೀಲ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಂಯಮ ಹಾಗೂ ಸಮಯ ಪ್ರಜ್ಞೆ ಮೈಗೂಡಿಸಿಕೊಳ್ಳಬೇಕು. ಆದರ್ಶ ವ್ಯಕ್ತಿಗಳಾಗಲು ಪ್ರಯತ್ನಿಸಬೇಕು ಎಂದು ಸಲಹೆ ಮಾಡಿದರು.
ಮಂದಕನಳ್ಳಿಯ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಚಂದ್ರಕಾಂತ ಗಂಗಶೆಟ್ಟಿ, ಶ್ರೀ ಸ್ವಾಮಿ ನರೇಂದ್ರ ಕಾಲೇಜು ನಿರ್ದೇಶಕಿ ಕಲ್ಪನಾ ಮಠಪತಿ, ಪ್ರಾಚಾರ್ಯೆ ಮಂಗಲಾ ಎಂ, ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net