ಮಲ್ಲಮ್ಮ ಜಯಂತಿ ಸರಳ ಆಚರಣೆಗೆ ನಿರ್ಧಾರ

Shankar Raddy Chitta
Published on

ಬೀದರ್: ಲೋಕಸಭೆ ಚುನಾವಣೆ ನಿಮಿತ್ತ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಈ ಬಾರಿ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ರೆಡ್ಡಿ ಸಮಾಜದ ಜಿಲ್ಲಾ ಅಧ್ಯಕ್ಷ ಶಂಕರರೆಡ್ಡಿ ಚಿಟ್ಟಾ ಹೇಳಿದರು.
ನಗರದ ಅಮಲಾಪುರ ರಸ್ತೆಯಲ್ಲಿ ಇರುವ ಹೇಮರೆಡ್ಡಿ ಮಲ್ಲಮ್ಮ ಮಂದಿರದಲ್ಲಿ ನಡೆದ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು. ಮೇ 10 ರಂದು ಜಯಂತಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಮೇ 9 ರಂದು ಸಂಜೆ 7.30ಕ್ಕೆ ನಗರದ ಹೇಮರೆಡ್ಡಿ ಮಲ್ಲಮ್ಮ ಮಂದಿರದಲ್ಲಿ ದೀಪೋತ್ಸವ ಹಾಗೂ ಪ್ರಸಾದ ವಿತರಣೆ ಜರುಗಲಿದೆ. ಮೇ 10 ರಂದು ಬೆಳಿಗ್ಗೆ 7.15ಕ್ಕೆ ಅಭಿಷೇಕ, ಬೆಳಿಗ್ಗೆ 9.15ಕ್ಕೆ ಧ್ವಜಾರೋಹಣ, ಬಳಿಕ ತೊಟ್ಟಿಲು ಹಾಗೂ ಪ್ರಸಾದ ವಿತರಣೆ ನಡೆಯಲಿದೆ ಎಂದು ಹೇಳಿದರು.
ಸಮಾಜ ಬಾಂಧವರು ಜಯಂತಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು. ಜಿಲ್ಲಾ ರೆಡ್ಡಿ ಸಮಾಜದ ಪದಾಧಿಕಾರಿಗಳು ಹಾಗೂ ಸಮಾಜದ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net