ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಿ

Vakilar sang
Published on

ಬೀದರ್: ನ್ಯಾಯವಾದಿ ಬಿ.ಸಿ. ಕರ್ಸೆ ಮೇಲೆ ಅಪರಿಚಿತ ದುಷ್ಕರ್ಮಿಗಳು ಹಲ್ಲೆ ನಡೆಸಿರುವುದನ್ನು ಖಂಡಿಸಿ ಜಿಲ್ಲಾ ವಕೀಲರ ಸಂಘದಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.
ಸಂಘದ ಜಿಲ್ಲಾಧ್ಯಕ್ಷ ಶಿವಶರಣಪ್ಪ ಪಾಟೀಲ್ (ಪುಟ್ಟು) ನೇತೃತ್ವದಲ್ಲಿ ನ್ಯಾಯಾಲಯದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಹಲ್ಲೆ ಮಾಡಿದವರ ವಿರುದ್ಧ ಕ್ರಮ ಜರುಗಿಸುವಂತೆ ವಕೀಲರು ಒತ್ತಾಯಿಸಿದರು.
ನ್ಯಾಯವಾದಿ ಕರ್ಸೆ ಕೆಎಚ್.ಬಿ ಕಾಲನಿಯಲ್ಲಿ ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ಅಪರಿಚಿತರು ಮುಖಕ್ಕೆ ಖಾರದ ಪುಡಿ ಎರಚಿ ಹಲ್ಲೆ ಮಾಡಿದ್ದಾರೆ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಪ್ರಯತ್ನಿಸಿದ್ದು, ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದುಷ್ಕರ್ಮಿಗಳನ್ನು ಕೂಡಲೆ ಬಂಧಿಸಿ ನ್ಯಾಯವಾದಿ ಕರ್ಸೆ ಅವರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.
ಸಂಘದ ಜಿಲ್ಲಾ ಉಪಾಧ್ಯಕ್ಷ ಗುಂಡುರಡ್ಡಿ ಗುಡಾಡಿ, ಪ್ರಧಾನ ಕಾರ್ಯದರ್ಶಿ ನಾಗೇಂದ್ರ ಬಿರಾದಾರ್, ಜಂಟಿ ಕಾರ್ಯದರ್ಶಿ ಶಿಲ್ಪಾ ಪಾಟೀಲ್, ಪ್ಯಾರುಸಾಬ್ ಎಂ.ಶೇಖ್ ಇತರರು ಪಾಲ್ಗೊಂಡಿದ್ದರು. ಜಿಲ್ಲಾಧಿಕಾರಿ ಗೋವಿಂದರಡ್ಡಿ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net