ಹೃದಯಘಾತದಿಂದ ಅಧಿಕಾರಿ ಸಾವು

Anand
Published on

ಬೀದರ್: ಲೋಕಸಭೆ ಚುನಾವಣೆ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಾಘಾತದಿಂದ ಸಾವಿಗೀಡಾದ ಘಟನೆ ಸೋಮವಾರ ಮಧ್ಯಾಹ್ನ ಚಿಟಗುಪ್ಪ ತಾಲೂಕಿನ ಕೋಡಂಬಲ್ ಚೆಕ್ ಪೋಸ್ಟ್ ಬಳಿ ನಡೆದಿದೆ.
ಕೋಡಂಬಲ್ ಚೆಕ್ ಪೋಸ್ಟ್ ನಲ್ಲಿ ಎಸ್ಎಸ್ಟಿ ತಂಡದ ಮುಖ್ಯಸ್ಥರಾಗಿ ಕೆಲಸ ಮಾಡುತ್ತಿದ್ದ ಸಹಾಯಕ ಕೃಷಿ ಅಧಿಕಾರಿ ಆನಂದ ತೆಲಂಗ್ (32) ಸಾವನ್ನಪ್ಪಿದ್ದಾರೆ.
ಮೂಲತಃ ಚಿಟ್ಟಗುಪ್ಪ ನಿವಾಸಿಯಾದ ಆನಂದ ಚೆಕ್ ಪೋಸ್ಟ್ ಲ್ಲಿ ಕರ್ತವ್ಯದಲ್ಲಿದ್ದಾಗ ಹೃದಯಾಘಾತವಾಗಿದೆ. ತಕ್ಷಣ ಆಸ್ಪತ್ರೆಗೆ ತೆಗೆದುಕೊಂಡು ಹೋಗುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net