ಅರುಣೋದಯ ಶಾಲೆಗೆ ಶೇ.94.11 ಫಲಿತಾಂಶ

Chandrashekhar Mahesh
Published on

ಬೀದರ್: ಋಷಿಕೇಶ ಶಿಕ್ಷಣ ಸಂಸ್ಥೆಯ ಸಂಚಾಲಿತ ಇಲ್ಲಿಯ ಅರುಣೋದಯ ಪ್ರೌಢಶಾಲೆಯು ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದೆ.
ಪರೀಕ್ಷೆ ಬರೆದ 17 ವಿದ್ಯಾರ್ಥಿಗಳಲ್ಲಿ 16 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಶಾಲೆಗೆ ಶೇ 94.11 ರಷ್ಟು ಫಲಿತಾಂಶ ಬಂದಿದೆ. 12 ಪ್ರಥಮ ದರ್ಜೆ, ತಲಾ ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ಹಾಗೂ ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಚಂದ್ರಶೇಖರ ಮಹೇಶ ಶೇ 87.2, ರಾಧಿಕಾ ಮೊಗಲಪ್ಪ ಶೇ 82.56, ಲಿಂಗರಾಜ ಶಿವಕುಮಾರ ಶೇ 81.76, ಮೇಘಾ ಸುಧಾಕರ ಶೇ 81.44, ದೀಪಾಲಿ ಸಂತೋಷ ಶೇ 81.12 ರಷ್ಟು ಅಂಕ ಗಳಿಸಿದ್ದಾರೆ. ಶಾಲೆಯ ಅನೇಕ ವಿದ್ಯಾರ್ಥಿಗಳು ಕನ್ನಡ ಹಾಗೂ ಹಿಂದಿಯಲ್ಲಿ ಗರಿಷ್ಠ ಅಂಕ ಗಳಿಸಿದ್ದಾರೆ ಎಂದು ಶಾಲೆಯ ಆಡಳಿತಾಧಿಕಾರಿ ಸಂತೋಷಕುಮಾರ ಮಂಗಳೂರೆ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಕುಶಾಲರಾವ್ ಪಾಟೀಲ ಗಾದಗಿ, ಉಪಾಧ್ಯಕ್ಷ, ಕಾರ್ಯದರ್ಶಿ, ಆಡಳಿತ ಮಂಡಳಿ ಸದಸ್ಯರು, ಮುಖ್ಯಶಿಕ್ಷಕ ಹಾಗೂ ಶಿಕ್ಷಕರು ಸಂತಸ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net