ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ.100 ಫಲಿತಾಂಶ

Saignyan School 1- Sudeep Basavaraj
Published on

ಬೀದರ್: ಇಲ್ಲಿಯ ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಸತತ ಮೂರನೇ ವರ್ಷವೂ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದು ಗಮನ ಸೆಳೆದಿದೆ.
ಪರೀಕ್ಷೆ ಬರೆದ ಶಾಲೆಯ ಎಲ್ಲ 27 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
2 ಅಗ್ರಶ್ರೇಣಿ, 10 ಪ್ರಥಮ ದರ್ಜೆ, 6 ದ್ವಿತೀಯ ದರ್ಜೆ ಹಾಗೂ 9 ವಿದ್ಯಾರ್ಥಿಗಳು ಸಾಮಾನ್ಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ಸುದೀಪ್ ಬಸವರಾಜ ಶೇ 91.4 ರಷ್ಟು ಅಂಕ ಗಳಿಸಿ ಶಾಲೆಗೆ ಟಾಪರ್ ಆಗಿದ್ದಾರೆ. ಭಾರ್ಗವ್ ಪುಲಕೇಶಿ ಶೇ 83.5 ರಷ್ಟು ಅಂಕ ಗಳಿಸಿ ಅಗ್ರಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಉತ್ತಮ ಶೈಕ್ಷಣಿಕ ವಾತಾವರಣ, ಗುಣಮಟ್ಟದ ಶಿಕ್ಷಣ, ಆಡಳಿತ ಮಂಡಳಿ, ಶಿಕ್ಷಕರ ಮಾರ್ಗದರ್ಶನ, ಪಾಲಕರ ಸಹಕಾರ ಹಾಗೂ ವಿದ್ಯಾರ್ಥಿಗಳ ಪರಿಶ್ರಮದಿಂದಾಗಿ 10ನೇ ಪರೀಕ್ಷೆಯಲ್ಲಿ ಸತತ ಮೂರನೇ ವರ್ಷ ಸಹ ಶಾಲೆ ಶೇ 100ಕ್ಕೆ 100 ರಷ್ಟು ಫಲಿತಾಂಶ ದಾಖಲಿಸಿದೆ ಎಂದು ಶಾಲೆಯ ಮುಖ್ಯಸ್ಥರು ಹೇಳಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಅಧ್ಯಕ್ಷ ರಮೇಶ ಕುಲಕರ್ಣಿ, ಕಾರ್ಯದರ್ಶಿ ಸುರೇಶ ಕುಲಕರ್ಣಿ, ಆಡಳಿತ ಮಂಡಳಿ ಸದಸ್ಯರು, ಆಡಳಿತಾಧಿಕಾರಿಗಳಾದ ಆರತಿ ಆರ್. ಕುಲಕರ್ಣಿ, ವೈಶಾಲಿ ಎಸ್. ಕುಲಕರ್ಣಿ, ಪ್ರಾಚಾರ್ಯೆ ತನುಜಾ, ಶಾಲೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net