ಸಿದ್ಧಾರೂಢ ಶಾಲೆಗೆ ಶೇ.100 ಫಲಿತಾಂಶ

Siddharoodh School 1- Shrishail
Published on

ಬೀದರ್: ನಗರದ ಸಿದ್ಧಾರೂಢ ಪಬ್ಲಿಕ್ ಶಾಲೆಗೆ ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಬಂದಿದೆ.
11 ವಿದ್ಯಾರ್ಥಿಗಳು ಅಗ್ರಶ್ರೇಣಿ, 13 ಪ್ರಥಮ ದರ್ಜೆ ಹಾಗೂ 16 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.
ಶ್ರೀಶೈಲ್ ಶೇ 90.6 ರಷ್ಟು ಅಂಕಗಳೊಂದಿಗೆ ಶಾಲೆಗೆ ಮೊದಲ ಸ್ಥಾನ ಗಳಿಸಿದ್ದಾರೆ. ಬಸವಾಂಜಲಿ ವಿ ಶೇ 90.2, ಶಿವಕುಮಾರ ಶೇ 90 ಹಾಗೂ ಆಕಾಶ ಶೇ 89.2 ರಷ್ಟು ಅಂಕ ಗಳಿಸಿ ಗಮನ ಸೆಳೆದಿದ್ದಾರೆ. ಶಾಲೆಯ ವಿದ್ಯಾರ್ಥಿಗಳ ಸಾಧನೆಗೆ ಚಿದಂಬರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಶಿವಕುಮಾರ ಸ್ವಾಮೀಜಿ, ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಆಡಳಿತಾಧಿಕಾರಿ ಡಾ. ಹಾವಗಿರಾವ್ ಮೈಲಾರೆ ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net