

ಬೀದರ್: ನೂತನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೊಬೈಲ್ ಕಳೆದಿರುವ ಬಗ್ಗೆ ದಾಖಲಾಗಿದ್ದ ಪ್ರಕರಣ ಭೇದಿಸಿರುವ ಖಾಕಿ ಪಡೆ, 12 ಲಕ್ಷ ರೂ. ಮೌಲ್ಯದ 52 ಮೊಬೈಲ್ಗಳನ್ನು ವಶಪಡಿಸಿಕೊಂಡಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಕಳೆದು ಹೋಗಿದ್ದ ಮೊಬೈಲ್ಗಳನ್ನು ಸಂಬಂಧಿಸಿದ ಮಾಲೀಕರಿಗೆ ನೀಡಿದ ಎಸ್ಪಿ ಚನ್ನಬಸವಣ್ಣ ಲಂಗೋಟಿ ಮಾತನಾಡಿ, ಜಿಲ್ಲೆಯ ಸಾರ್ವಜನಿಕರು ಮೊಬೈಲ್ ಕಳೆದುಕೊಂಡಲ್ಲಿ ಈ ಲಾಸ್ಟ್ ಅಥವಾ ಸಿಇಐಆರ್ ಪೋರ್ಟಲ್ನಲ್ಲಿ ದೂರು ದಾಖಲಿಸಿದರೆ ಜಿಲ್ಲಾ ಪೊಲೀಸ್ ಶೀಘ್ರದಲ್ಲಿ ಪತ್ತೆ ಹಚ್ಚಿ ದೂರುದಾರರಿಗೆ ವಾಪಸ್ ನೀಡಲಿದೆ ಎಂದು ತಿಳಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಕಾರಿ ಚಂದ್ರಕಾಂತ ಪೂಜಾರಿ, ಡಿವೈಎಸ್ಪಿ ಶಿವನಗೌಡ ಪಾಟೀಲ್, ನೂತನ ನಗರ ಠಾಣೆ ಸಿಪಿಐ ಸಂತೋಷ ಎಲ್.ಟಿ., ಸಿಬ್ಬಂದಿ ರಾಹುಲ್, ಸಚಿನ್, ಸಂತೋಷ, ರಾಮಣ್ಣ, ಧನರಾಜ, ಮಲ್ಲಿಕಾರ್ಜುನ, ಭರತ, ನಿಂಗಪ್ಪ ಇತರರಿದ್ದರು.