ರಾಜೀವ್ ಗಾಂಧಿ ಪುಣ್ಯಸ್ಮರಣೆ

Rajiva Gandhi Punyasmarane At Dist Congress Office Bidar
Published on

ಬೀದರ್: ನಗರದ ಶಿವನಗರದಲ್ಲಿ ಇರುವ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಯಲ್ಲಿ ಮಂಗಳವಾರ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೆ ಆಚರಿಸಲಾಯಿತು.
ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿ ಗೌರವಿಸಲಾಯಿತು.
ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಪಂಡಿತರಾವ್ ಚಿದ್ರಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಜಾನ್ ವೆಸ್ಲಿ, ಪ್ರಧಾನ ಕಾರ್ಯದರ್ಶಿ ಸಂಜಯ್ ಜಾಗೀರದಾರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಗೀತಾ ಚಿದ್ರಿ, ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಎ. ಸಮಿ, ಮುಖಂಡರಾದ ಶೇಖ್ ಹಾಜಿ, ನಯೀಮ್ ಕಿರ್ಮಾನಿ, ಸುನೀಲ್ ಬಚ್ಚನ್, ಯೋಗೇಶ್ ಮತ್ತಿತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net