ಡಾ. ಚಂದ್ರಶೇಖರ ಪಾಟೀಲ ಪರ ಬಿರುಸಿನ ಪ್ರಚಾರ

Karnataka College
Published on

ಬೀದರ್: ವಿಧಾನ ಪರಿಷತ್ತಿನ ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ ಅವರ ಪರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಮಾಜಿ ಸಚಿವ ರಾಜಶೇಖರ ಪಾಟೀಲ ನಗರದಲ್ಲಿ ಶುಕ್ರವಾರ ಬಿರುಸಿನ ಪ್ರಚಾರ ನಡೆಸಿದರು.
ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಪದವಿಪೂರ್ವ ಕಾಲೇಜು, ಫಾರ್ಮಸಿ ಕಾಲೇಜು, ಎನ್.ಕೆ. ಜಾಬಶೆಟ್ಟಿ ಆಯುವೇದಿಕ್ ವೈದ್ಯಕೀಯ ಕಾಲೇಜು, ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯ, ಸಿದ್ಧರಾಮೇಶ್ವರ ಆಯುರ್ವೇದಿಕ್ ವೈದ್ಯಕೀಯ ಕಾಲೇಜು ಮತ್ತಿತರ ಕಡೆ ಭೇಟಿ ನೀಡಿ ಮತ ಯಾಚಿಸಿದರು.
ವಿಧಾನ ಪರಿಷತ್ ಸದಸ್ಯರಾಗಿ ಚಂದ್ರಶೇಖರ ಪಾಟೀಲ ಉತ್ತಮ ಕೆಲಸ ಮಾಡಿದ್ದಾರೆ. ಪದವೀಧರರ ಅನೇಕ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಿದ್ದಾರೆ. ಹೀಗಾಗಿ ಪದವೀಧರರ ಹಿತರಕ್ಷಣೆಗೆ ಅವರಿಗೆ ಮತ್ತೊಂದು ಅವಕಾಶ ಕೊಡಬೇಕು ಎಂದು ಮನವಿ ಮಾಡಿದರು.
ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ, ಮಾಜಿ ಶಾಸಕ ಅಶೋಕ ಖೇಣಿ, ಬಿಡಿಎ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಕೆಪಿಸಿಸಿ ಉಪಾಧ್ಯಕ್ಷ ಜಾನ್ ವೆಸ್ಲಿ, ಎಚ್.ಕೆ.ಇ. ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕ ಡಾ. ರಜನೀಶ್ ವಾಲಿ, ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಜಾರ್ಜ್ ಫರ್ನಾಂಡೀಸ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net