ಪಾಟೀಲ್ ಜಯ ಕಾರ್ಯಕರ್ತರ ಗೆಲುವು

3
Published on

ಬೀದರ್: ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಇಲ್ಲಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬೀದರ್ ವಿಧಾನಸಭೆ ಕ್ಷೇತ್ರದ ಘಟ ನಾಯಕರ ಸಭೆ ನಡೆಯಿತು.
ವಿಭಾಗೀಯ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್ ಮಾತನಾಡಿ, ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ಅಮರನಾಥ ಪಾಟೀಲ್ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದು, ಅವರ ಗೆಲುವು ಪ್ರತಿಯೊಬ್ಬ ಕಾರ್ಯಕರ್ತರ ಗೆಲುವಾಗಿದೆ. ಎಲ್ಲ ಪದವೀಧರ ಮತದಾರರನ್ನು ಭೇಟಿ ಮಾಡಿ ಬಿಜೆಪಿಗೆ ಬೆಂಬಲಿಸುವಂತೆ ಮನವಿ ಮಾಡಬೇಕು ಎಂದರು.
ನಗರ ಮಂಡಲ ಅಧ್ಯಕ್ಷ ಶಶಿಧರ ಹೊಸಳ್ಳಿ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಪೂಜಾರಿ, ಚುನಾವಣೆ ಸಂಚಾಲಕ ರೇವಣಸಿದ್ದಪ್ಪ ಜಲಾದೆ, ಸಹ ಸಂಚಾಲಕ ಮಹೇಶ ಪಾಲಂ, ರಾಜಶೇಖರ ನಾಗಮೂರ್ತಿ, ಗುರುನಾತ ಜ್ಯಾಂತಿಕರ್ ಇತರರಿದ್ದರು. ಸುಭಾಷ ಮಡಿವಾಳ ನಿರೂಪಣೆ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net