ಜೂ.3ರಂದು ಕಲಬುರಗಿ ಚಲೋ

anganwadi
Published on

ಬೀದರ್: ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಕಲಿಕೆಗೆ ಅತಿಥಿ ಶಿಕ್ಷಕರನ್ನು ನೇಮಿಸುವ ಸರ್ಕಾರದ ನಿರ್ಧಾರ ಖಂಡಿಸಿ ಅಂಗನವಾಡಿ ನೌಕರರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರದರ್ಶನ ನಡೆಸಿದ ಅವರು, ಸರ್ಕಾರದ ಈ ನಿರ್ಧಾರದ ವಿರುದ್ಧ ಜೂ.3ರಂದು ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಕೆಲಸ ಸ್ಥಗಿತಗೊಳಿಸಿ ಕಲಬುರಗಿ ಚಲೋ ಹಮ್ಮಿಕೊಳ್ಳಲಾಗಿದೆ. ಎಲ್ಕೆಜಿ, ಯುಕೆಜಿ ಶಿಕ್ಷಣಕ್ಕೆ ಅಂಗನವಾಡಿ ನೌಕರರನ್ನು ಬಳಸಿಕೊಳ್ಳಬೇಕು. ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಪೂರ್ವ ಪ್ರಾಥಮಿಕ ಶಿಕ್ಷಣದ ಜವಾಬ್ದಾರಿ ಕೊಡಬೇಕೆಂದು ಹಿಂದಿನಿಂದಲೂ ಸರ್ಕಾರ ಹೇಳುತ್ತ ಬರುತ್ತಿದೆ. ತಜ್ಞರು ಸಹ ಒತ್ತು ನೀಡಿದ್ದಾರೆ. ಆದರೀಗ ಅತಿಥಿ ಶಿಕ್ಷಕರ ನಿಯೋಜನೆಗೆ ಮುಂದಾಗಿರುವ ಸರ್ಕಾರದ ಕ್ರಮ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಅಂಗನವಾಡಿ ಸಂಘಟನೆ ಅಧ್ಯಕ್ಷೆ ಸುಶೀಲಾ ಹತ್ತಿ, ಪ್ರಧಾನ ಕಾರ್ಯದರ್ಶಿ ಜಯಶ್ರೀ ಮೆಂಡೊಳೆ, ಖಜಾಂಚಿ ಶಾಂತಾ ನಾಗೂರೆ, ಶ್ರೀದೇವಿ ಚುಡೆ, ಉಷಾ ಗುತ್ತೇದಾರ್, ಶಕುಂತಲಾ ಸೋನಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net