

ಬೀದರ್: ಇಲ್ಲಿನ ಜಿಎನ್.ಡಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜೈ ಶ್ರೀರಾಮ ಹಾಡು ಹಾಕಿದ್ದಕ್ಕೆ ಮುಸ್ಲಿಂ ವಿದ್ಯಾರ್ಥಿಗಳು ಗಲಾಟೆ ಮಾಡಿ ದಾಂಧಲೆ, ಹಲ್ಲೆ ನಡೆಸಿರುವುದು ಖಂಡನೀಯ. ಜಿಲ್ಲಾಡಳಿತ, ಪೊಲೀಸ್ ಇಲಾಖೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಆಗ್ರಹಿಸಿದ್ದಾರೆ.
ಯಾರದೋ ಒತ್ತಡಕ್ಕೆ ಒಳಗಾಗಿ, ತುಷ್ಠೀಕರಣ ರಾಜಕಾರಣದಲ್ಲಿ ತೊಡಗಿ ವಿನಾಕಾರಣ ಹಲ್ಲೆಗೊಳಗಾದ ಹಿಂದು ವಿದ್ಯಾರ್ಥಿಗಳ ಮೇಲೆ ಹಾಕಿರುವ ಪ್ರಕರಣ ಕೂಡಲೇ ವಾಪಸ್ ಪಡೆಯಬೇಕು. ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಇಲ್ಲದಿದ್ದರೆ ಪಕ್ಷದಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.