

ಬೀದರ್: ಜೈಶ್ರೀರಾಮ ಹಾಡ ಹಚ್ಚಿರುವ ಏಕೈಕ ಕಾರಣಕ್ಕಾಗಿ ಹಿಂದು ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಮೇಲೆ ದಾಳಿ ನಡೆಸಿದ ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ಕ್ರಮಕೈಗೊಳ್ಳಬೇಕು ಎಂದು ಬಿಜೆಪಿಯ ವಿಭಾಗೀಯ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್ ಆಗ್ರಹಿಸಿದ್ದಾರೆ.
ಜಿಎನ್ಡಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಹಿಂದು ಯುವಕರ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ್ದನ್ನು ತೀವ್ರವಾಗಿ ಖಂಡಿಸಲಾಗುವುದು. ಜಿಲ್ಲಾಡಳಿತ ಈ ಘಟನೆಯನ್ನು ಸೂಕ್ಷ್ಮವಾಗಿ ಪರಿಗಣಿಸಿ ಜಿಹಾದಿ ಮನಸ್ಥಿತಿಯ ವಿದ್ಯಾರ್ಥಿಗಳ ಹಿನ್ನೆಲೆಯನ್ನು ಪರಿಶೀಲನೆ ನಡೆಸಿ ಕಠಿಣ ಕ್ರಮಕೈಗೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.