

ಬೀದರ್: ಈಶಾನ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಚಂದ್ರಶೇಖರ ಪಾಟೀಲ್ ಅವರಿಗೆ ಜಿಲ್ಲೆಯ ಪದವೀಧರ ಮತದಾರರು ಮೊದಲ ಆದ್ಯತೆ ನೀಡಬೇಕು ಎಂದು ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ ದೇವಪ್ಪ ಕೋರಿದ್ದಾರೆ.
ಪದವೀಧರರ ಹಲವು ಸಮಸ್ಯೆಗಳನ್ನು ಸಿದ್ದರಾಮಯ್ಯ ಸರ್ಕಾರ ಬಗೆಹರಿಸಿದೆ. ಪದವಿ ಪಡೆದು ಕೆಲಸ ಇಲ್ಲದ ನಿರುದ್ಯೋಗಿಗಳಿಗೆ ಭತ್ಯೆ, ತಾತ್ಕಾಲಿಕ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರ ವೇತನ ಹೆಚ್ಚಳ ಸೇರಿ ಅನೇಕ ಸೌಲಭ್ಯಗಳನ್ನು ಸರ್ಕಾರ ಒದಗಿಸಿದೆ. ಹೀಗಾಗಿ ಡಾ.ಪಾಟೀಲ್ ಅವರನ್ನು ಬೆಂಬಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ